Karnataka village accountant post notification

 


ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.



ಹುದ್ದೆಯ ಹೆಸರು:- ಗ್ರಾಮ ಆಡಳಿತ ಅಧಿಕಾರಿ


ಶೈಕ್ಷಣಿಕ ಅರ್ಹತೆ :-ದ್ವಿತೀಯ ಪಿಯುಸಿ ತತ್ಸಮಾನ


ವಯೋಮಿತಿ :-ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕದಂದು 18 ವಯಸ್ಸು ಆಗಿರಬೇಕು.




ಪಿಂಚಣಿ:- ಪಿಂಚಣಿ ರಹಿತ (ಎಂ ಪಿ ಎಸ್)



ಅರ್ಜಿ ಸಲ್ಲಿಸುವ ವಿಧಾನ :- http://kea.kar.nic.in ಮೂಲಕ ಆನ್ಲೈನ್ ನಲ್ಲಿ ಮಾತ್ರ.


ಸ್ಪರ್ಧಾತ್ಮಕ ಪರೀಕ್ಷಾ ವಿಧಾನ :- ಬಹು ಆಯ್ಕೆಯ ಪ್ರಶ್ನೆ ಪತ್ರಿಕೆ ಗಳು ಇರುತ್ತವೆ.




ಪತ್ರಿಕೆ ಒಂದು:- ಸಾಮಾನ್ಯ ಜ್ಞಾನ

ಪತ್ರಿಕೆ ಎರಡು:- ಸಂವಹನ


ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ :-ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಬಹು ಆಯ್ಕೆ ಮಾದರಿ ಪತ್ರಿಕೆಯಾಗಿದ್ದು, ಗರಿಷ್ಠ 150 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಗಳು ಇದರಲ್ಲಿ ಅರ್ಹತೆ ಗಳಿಸಲು ಕನಿಷ್ಠ 50 ಅಂಕಗಳನ್ನು ಗಳಿಸತಕ್ಕದ್ದು. ಕನಿಷ್ಠ 50 ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಆಯ್ಕೆಗೆ ಅರ್ಹರಾಗುವುದಿಲ್ಲ.


(ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹುದ್ದೆಗಳ ಆಯ್ಕೆಗೆ ಪರಿಗಣಿಸುವುದಿಲ್ಲ)


ಋಣಾತ್ಮಕ ಮೌಲ್ಯಮಾಪನ:-ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳಲ್ಲಿನ ಪ್ರತಿಯೊಂದು ಪ್ರಶ್ನೆಗೂ 04 ಪರ್ಯಾಯ ಉತ್ತರಗಳಿದ್ದು, ಅಭ್ಯರ್ಥಿಯು ಯಾವುದಾದರೂ ಒಂದು ಸರಿ ಉತ್ತರವನ್ನು ಮಾತ್ರ ಆಯ್ಕೆ ಮಾಡತಕ್ಕದ್ದು. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು (¼) ಅಂಕಗಳನ್ನು ಕಳೆಯಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಕನ್ನಡ ಮತ್ತು ಆಂಗ್ಲಭಾಷೆಗಳೆರಡರಲ್ಲೂ ಇರುತ್ತವೆ. ಕನ್ನಡ ಭಾಷೆಯಲ್ಲಿ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದಲ್ಲಿ ಅಭ್ಯರ್ಥಿಗಳು ಆಂಗ್ಲಭಾಷೆ ಪ್ರಶ್ನೆಗಳನ್ನು ನೋಡುವುದು ಹಾಗೂ ಇದೇ ಅಂತಿಮವಾಗಿರುತ್ತದೆ.



ಅರ್ಹತಾ ಶರತ್ತುಗಳು

Post a Comment (0)
Previous Post Next Post